Saturday, April 19, 2025
Google search engine

Homeರಾಜ್ಯಸುದ್ದಿಜಾಲಗೊಂಬೆ ನಾಡಿನ ಅಭಿವೃದ್ದಿಗೆ ರಾಜ್ಯ ಸರ್ಕಾರದಿಂದ ಹೊಸ ಭಾಷ್ಯ: ಸಚಿವ ರಾಮಲಿಂಗಾರೆಡ್ಡಿ

ಗೊಂಬೆ ನಾಡಿನ ಅಭಿವೃದ್ದಿಗೆ ರಾಜ್ಯ ಸರ್ಕಾರದಿಂದ ಹೊಸ ಭಾಷ್ಯ: ಸಚಿವ ರಾಮಲಿಂಗಾರೆಡ್ಡಿ

ಚನ್ನಪಟ್ಟಣ ತಾಲ್ಲೂಕಿನ ಅಭಿವೃದ್ದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ 494 ಕೋಟಿ ರೂ.ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ

ರಾಮನಗರ: ಚನ್ನಪಟ್ಟಣ ತಾಲ್ಲೂಕು ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅದಕ್ಕೆ ಪೂರಕವಾಗಿ ೪೯೪ ಕೋಟಿ ರೂ.ಗಳವಿವಿಧ ಕಾಮಗಾರಿಗಳಿಗೆಭೂಮಿ ಪೂಜೆ ನೆರವೇರಿಸುವ ಮೂಲಕ ಗೊಂಬೆ ನಾಡಿನ ಅಭಿವೃದ್ದಿಗೆ ಹೊಸ ಭಾಷ್ಯಾ ಬರೆಯಲಾಗುತ್ತಿದೆ ಎಂದು ಸಾರಿಗೆ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಅವರು ಸೆ. ೨೦ರ ಶುಕ್ರವಾರ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಆಯೋಜಿಸಲಾಗಿದ್ದ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಇತ್ತೀಚೆಗೆ ಚನ್ನಪಟ್ಟಣಾದ್ಯಂತ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ತಾಲ್ಲೂಕಿನ ನಾಗರೀಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸುವಂತೆ ನಾಗರೀಕರು ಮನವಿ ಸಲ್ಲಿಸಿದ್ದರು.

ಈ ದೆಸೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಹಾಗೂ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಅಂದಾಜು ಮೊತ್ತದಲ್ಲಿ ೧೧೫ ಕೋಟಿ ವೆಚ್ಚದಲ್ಲಿ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ಮತ್ತು ಬ್ಯಾರೆಜ್ ನಿಮಾಣ ಕಾಮಗಾರಿ, ೯೯ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರ ಒಳ ಚರಂಡಿ ಕಾಮಗಾರಿ (ಯುಜಿಡಿ), ೫೮ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರದ ವಾರ್ಡ್‌ಗಳಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ, ೪೩ ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ಹಲವಾರು ಕೆರೆಗಳಿಗೆ ನೀರು ತುಂಬಿಸುವ ಪೈಪ್‌ಲೈನ್ ಕಾಮಗಾರಿ, ೩೯ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ, ೩೩ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರ ಕುಡಿಯುವ ನೀರು ಸರಬರಾಜಿಗಾಗಿ, ೩೩ ಕೋಟಿ ವೆಚ್ಚದಲ್ಲಿ ಗ್ರಾಮಾಂತರ ಪ್ರದೇಶದ ರಸ್ತೆಗಳ ಅಭಿವೃದ್ಧಿಗಾಗಿ (ಪಿಡಬ್ಲ್ಯೂಡಿ), ೧೬ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರ ಅಲ್ಪಸಂಖ್ಯಾತ ವಾರ್ಡ್‌ಗಳ ರಸ್ತೆ ಮತ್ತು ಚರಂಡಿ ಕಾಮಗಾರಿ, ೧೦ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರಸಭೆ ನೂತನ ಕಾರ್ಯಾಲಯ ನಿರ್ಮಾಣಕ್ಕಾಗಿ, ೯.೮೦ ಕೋಟಿ ವೆಚ್ಚದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನಗಳ ನಿರ್ಮಾಣ, ೯ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರಸಭೆ ಪ್ರದೇಶದಲ್ಲಿ ಕ್ರೀಡಾಂಗಣ ನಿರ್ಮಾಣ, ೯ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರದ ಶೆಟ್ಟಿಹಳ್ಳಿಕೆರೆ ಅಭಿವೃದ್ಧಿ, ೫.೭೦ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ತಾಲ್ಲೂಕಿನ ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ,೫ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ನಗರ ಕಸವಿಲೇವಾರಿ ಘಟಕ ಸ್ಥಾಪನೆಗಾಗಿ, ೫ ಕೋಟಿ ವೆಚ್ಚದಲ್ಲಿ ಪೆಟ್ಟಶಾಲೆಯ ಮೈದಾನದಲ್ಲಿ ಸ್ಟೇಡಿಯಂ ನಿಮಾಣ ಹಾಗೂ ೫ ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ವಸತಿ ರಹಿತರಿಗೆ ಬಡಾವಣೆ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಮಾಡಲಾಗಿದೆ ಎಚಿದವರು ಹೇಳಿದರು.


ಇಂದು ಶಂಕುಸ್ಥಾಪನೆ ನೆರವೇರಿಸಿದ ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ,ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಪಂಚ ಗ್ಯಾರಂಟಿಗಳನ್ನು ೩ ತಿಂಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದಲ್ಲಿ ೨೯೩ ಕೋಟಿ ಮಹಿಳೆಯರುಶಕ್ತಿ ಯೋಜನೆಯಡಿ ಸಂಚರಿಸಿದ್ದಾರೆ. ಮಾತ್ರವಲ್ಲ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದರು. ವಿಧಾನ ಪರಿಷತ್ ಶಾಸಕರಾದ ಎಸ್. ರವಿ ಅವರು ಮಾತನಾಡಿ, ಈ ಕಾರ್ಯಕ್ರಮವು ಬಹಳ ವಿಶಿಷ್ಟವಾದದ್ದು, ಚನ್ನಪಟ್ಟಣ ತಾಲ್ಲೂಕಿನಲ್ಲಿ ಪ್ರಸ್ತುತ ಶಾಸಕರಿಲ್ಲ. ಈ ಕೊರತೆ ನೀಗಿಸಲು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ, ಮುಜರಾಯಿ ಸಚಿವರ ನೇತೃತ್ವದಲ್ಲಿ ತಾಲ್ಲೂಕಿನಜನ ಸಾಮಾನ್ಯರ ಕಷ್ಟಗಳ ನಿವಾರಣೆಗೆಪರಿಹಾರ ನೀಡುವಫಲಶೃತಿಯೇ ಈ ಕಾರ್ಯಕ್ರಮ, ಸಿದ್ದರಾಮಯ್ಯನವರ ಸರ್ಕಾರಕೊಟ್ಟ ಮಾತಿನಂತೆ ನಡೆದ ಸರ್ಕಾರವಾಗಿದೆ.ಪಂಚ ಗ್ಯಾರಂಟಿಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಹೆಣ್ಣು ಮಕ್ಕಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ೬೦ ಸಾವಿರ ಕೋಟಿ ಹಣ ಖರ್ಚು ಮಾಡಿ ಗ್ಯಾರಂಟಿಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಈ ಕಾರ್ಯಕ್ರಮ ಜನಪರ ನೈಜ ಕಾಳಜಿ ಇರುವಂತಹದ್ದು, ಕುಂದುಕೊರತೆ-ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಸಾವಿರಾರು ಅಹವಾಲುಗಳ ಅರ್ಜಿ ಸ್ವೀಕೃತವಾಯಿತು. ಅದರ ಅಂಗವಾಗಿ ನಿವೇಶನ ನೀಡಲಾಗುವುದು. ಇಲ್ಲಿನ ಜನರ ಸೇವೆ ಮಾಡಲು ೪೯೪ ಕೋಟಿಗೂ ಹೆಚ್ಚು ಅನುದಾನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹತ್ತು-ಹಲವು ಕಾಮಗಾರಿಗಳು, ಕಾಂಕ್ರೀಟ್ ರಸ್ತೆ, ಮನೆ ಹಂಚಿಕೆ, ಪೋಡಿ, ಪಹಣಿ ಸರಿಪಡಿಸುವುದು ಸ್ಭೆರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಬಾಗಿಲು ತೆರೆಯಲಾಗುತ್ತಿದೆ ಎಂದರು.
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್ ಅವರು ಮಾತನಾಡಿ, ಇದೊಂದು ಉತ್ತಮ ಕಾರ್ಯಕ್ರಮ, ಕ್ರಾಂತಿಕಾರಿಬದಲಾವಣೆ ಚನ್ನಪಟ್ಟಣದಲ್ಲಿ ೪೯೪ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಬಂದಿದ್ದಾರೆ. ರಸ್ತೆ, ಮನೆ, ಚರಂಡಿ ಸಮಸ್ಯೆ, ಕುಡಿಯುವ ನೀರು, ನಿವೇಶನ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು. ವಸತಿ ಇಲ್ಲದವರಿಗೆ ವಸತಿ ನೀಡಲಾಗುವುದು ಎಂದರು.

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಘುನಂದನ್ ರಾಮಣ್ಣ,ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದಎಸ್.ಆರ್. ಪ್ರಮೋದ್, ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದಚಂದ್ರಕಲಾ ಜಿ.ಸಿ.,ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ರಂಗನಾಥ್, ಉಪಾಧ್ಯಕ್ಷರಾದ ಶೇಖರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಮುಖಂಡರಾದ ಡಿ.ಕೆ. ಕಾಂತರಾಜ್, ವಿಶ್ವನಾಥ್ ಹಾಗೂ ಇತರರು ಉಪಸ್ಥಿತರಿದ್ದರು. ಚನ್ನಪಟ್ಟಣ ತಹಶೀಲ್ದಾರ್ ನರಸಿಂಹ ಮೂರ್ತಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ವಂದಿಸಿದರು.

RELATED ARTICLES
- Advertisment -
Google search engine

Most Popular