Sunday, April 20, 2025
Google search engine

Homeರಾಜ್ಯಮಾವುತರು ಮತ್ತು ಕಾವಾಡಿಗರ ಕುಟುಂಬದೊಂದಿಗೆ ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

ಮಾವುತರು ಮತ್ತು ಕಾವಾಡಿಗರ ಕುಟುಂಬದೊಂದಿಗೆ ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು ಸೆ.21: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ನೆಲೆಸಿರುವ ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಹಾರ ಬಡಿಸಿ, ಅವರೊಂದಿಗೆ ಕುಳಿತು ತಾವೂ ಉಪಹಾರ ಸೇವಿಸಿದರು.

ಬಳಿಕ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಟೆಂಟ್ ಶಾಲೆಗೆ ಚಾಲನೆ ನೀಡಿದರು. ಇದೇ ವೇಳೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ, ಅವರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿ ಗಜಪಡೆಯ ಪಾಲನೆ, ಪೋಷಣೆ ಕುರಿತು ವಿಚಾರಿಸಿದ ಸಚಿವರು, ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಅವರ ಯೋಗಕ್ಷೇಮ ವಿಚಾರಿಸಿದರು.

ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ವೀಕ್ಷಿಸಿ, ಮಾವುತರು ಹಾಗೂ ಕಾವಾಡಿಗರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಶಾಸಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular