Sunday, April 20, 2025
Google search engine

Homeರಾಜಕೀಯಜಮ್ಮು ಕಾಶ್ಮೀರ ಚುನಾವಣೆ: ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್, ಮೊಹರಂ ಹಬ್ಬಕ್ಕೆ ಉಚಿತವಾಗಿ ಎರಡು ಗ್ಯಾಸ್...

ಜಮ್ಮು ಕಾಶ್ಮೀರ ಚುನಾವಣೆ: ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್, ಮೊಹರಂ ಹಬ್ಬಕ್ಕೆ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್: ಅಮಿತ್ ಶಾ ಭರವಸೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್ ಮತ್ತು ಮೊಹರಂ ಹಬ್ಬದ ವೇಳೆ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬವು ೯೦ರ ದಶಕದಿಂದಲೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಯೋತ್ಪಾದನೆ ಕೊನೆಯಾಗಿದೆ. ಇಲ್ಲಿನ ಯುವಕರ ಕೈಗೆ ಕಲ್ಲುಗಳ ಬದಲಾಗಿ ಲ್ಯಾಪ್‌ಟಾಪ್ ನೀಡಲಾಗಿದೆ ಎಂದರು.

ಅಬ್ದುಲ್ಲಾ, ಮುಫ್ತಿ , ಮತ್ತು ನೆಹರು-ಗಾಂಧಿ ಕುಟುಂಬ ಈ ಮೂರು ಕುಟುಂಬಗಳು ಇಲ್ಲಿ ಪ್ರಜಾಪ್ರಭುತ್ವವನ್ನು ನಿಲ್ಲಿಸಿದ್ದವು. ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ೨೦೧೪ ರಲ್ಲಿ ಮೋದಿ ಸರ್ಕಾರ ಬರದಿದ್ದರೆ ಇಲ್ಲಿ ಬ್ಲಾಕ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುತ್ತಿರಲಿಲ್ಲ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular