Saturday, April 19, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ತಾಲೂಕು ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಕೆ.ಆರ್.ನಗರ: ತಾಲೂಕು ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ವಾರ್ಷಿಕ ಮಹಾಸಭೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಕೆ.ಆರ್.ನಗರ ತಾಲೂಕು ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯು ಸಮಾಜದ ಎಲ್ಲಾ ವರ್ಗದ ಬಡಜನತೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಸಹಕಾರ ನೀಡುವ ಮೂಲಕ ಕೆಳವರ್ಗದ ಜೀವನಮಟ್ಟವನ್ನು ಮೇಲೆತ್ತುವ ಕೆಲಸ ಮಾಡುತ್ತಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್ ಹೇಳಿದರು.

ಪಟ್ಟಣದ ಹೆಚ್.ಡಿ.ದೇವೇಗೌಡ ಸಮುದಾಯಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತಾಲೂಕು ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ವ್ಯವಸ್ಥೆಯಲ್ಲಿ ಬಡ, ಮಧ್ಯಮವರ್ಗದ ವ್ಯಾಪಾರಿಗಳು ದೊಡ್ಡ ಬ್ಯಾಂಕ್‌ಗಳಲ್ಲಿ ಸಣ್ಣಪ್ರಮಾಣದಲ್ಲಿ ಸಾಲವನ್ನು ಪಡೆದು ವ್ಯವಹರಿಸುವುದು ಕಷ್ಟಸಾಧ್ಯವಾಗಿದೆ. ಇಂತಹ ಸಣ್ಣ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರಲ್ಲಿ ಸಾಲ ನೀಡುವ ಮೂಲಕ ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಉತ್ತಮ ಬೆಳೆವಣಿಗೆಯಾಗಿದೆ ಎಂದರು.

ಈಗಾಗಲೆ ಲಾಭದಲ್ಲಿರುವ ಸೊಸೈಟಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಭದೊಂದಿಗೆ ಬ್ಯಾಂಕ್ ಆಗಿ
ಪರಿವರ್ತನೆಗೊಂಡು ವ್ಯಾಪಾರಿಗಳು, ಗ್ರಾಹಕರು ಹಾಗೂ ಜನತೆಗೆ ಆರ್ಥಿಕವಾಗಿ ನೆರವಾಗಲಿ ಎಂದು ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಮಿರ್ಲೆಶ್ರೀನಿವಾಸಗೌಡ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಸಂಘವು ೨೦೨೩-೨೪ನೇ ಸಾಲಿಗೆ ೭.೦೦,೯೮೩-೦೦ ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಭದೊಂದಿಗೆ ಹಲವು ಭವಿಷ್ಯದ ಯೋಜನೆಗಳನ್ನು ರೂಪಿಸಲು ಯೋಚಿಸಲಾಗಿದೆ ಎಂದರು.

ಸಂಘದ ಉಪಾಧ್ಯಕ್ಷ ವಿ.ಸಿ.ಶಿವರಾಮು, ಮತ್ತಿತರರು ಮಾತನಾಡಿದರು.

ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕೆ.ಜೆ.ಜೀವನ್ ವಾರ್ಷಿಕ ಆಯವ್ಯಯ ಮಂಡಿಸಿದರು. ನಿರ್ದೆಶಕರಾದ ಸಿ.ಜೆ.ಅರುಣ್‌ಕುಮಾರ್, ಶಂಕರೇಗೌಡ, ಹೆಬ್ಬಾಳು ಕೋಳಿರಾಜು ಹೆಚ್.ಪಿ.ಚಂದ್ರಶೇಖರ್, ಸಿ.ಜೆ.ಸುದೀಶ್‌ಕುಮಾರ್, ಅನಿಫ್‌ಕುಮಾರ್, ಸಿ.ಆರ್.ಉದಯಕುಮಾರ್, ಅಂಕನಹಳ್ಳಿತಿಮ್ಮಪ್ಪ ಕಲ್ಪನಾಧನಂಜಯ, ಕೆ.ವಿ.ಕವಿತಾಪ್ರಕಾಶ್, ಗೌರವ ಸಲಹೆಗಾರ ಸಿ.ಜೆ.ಆನಂದ್‌ಕುಮಾರ್, ಕಛೇರಿ ಸಹಾಯಕ
ಹೇಮಂತ್‌ಕುಮಾರ್ ಹಾಜರಿದ್ದರು.

ಇದೇ ಸಂಧರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚುಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮಾಡಲಾಯಿತು.

RELATED ARTICLES
- Advertisment -
Google search engine

Most Popular