Sunday, April 20, 2025
Google search engine

Homeಅಪರಾಧರೇಣುಕಾಸ್ವಾಮಿ ಹತ್ಯೆ ಕೇಸ್: ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು

ರೇಣುಕಾಸ್ವಾಮಿ ಹತ್ಯೆ ಕೇಸ್: ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವಂತ ಎ.೧೬ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ೧೭ ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಎ೧೬ನೇ ಆರೋಪಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕೋರ್ಟ್ ವಿಚಾರಣೆ ನಡೆಸಿತು.

ಇಂದು ಸೋಮವಾರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವಂತ ಎ.೧೬ ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಮರ್ಜರ್ ಕೇಸಲ್ಲಿ ಆರೋಪಿಯಾಗಿರುವಂತ ಕೇಶವ ಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.೧೬ ಆರೋಪಿಯಾಗಿರುವಂತ ಕೇಶವಮೂರ್ತಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿಲ್ಲ. ಬದಲಾಗಿ ಸಾಕ್ಷ್ಯನಾಶದ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಇದೇ ಪ್ರಕರಣದಲ್ಲಿ ಎ.೧ ಆರೋಪಿಯಾಗಿರುವಂತ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ೫೭ನೇ ಸಿಸಿಹೆಚ್ ಕೋರ್ಟ್ ಸೆ.೨೭ಕ್ಕೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular