Saturday, April 19, 2025
Google search engine

Homeಸ್ಥಳೀಯದಸರಾ ಮಹೋತ್ಸವ : ಇಂದಿನಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ದಸರಾ ಮಹೋತ್ಸವ : ಇಂದಿನಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಸೇರಿದಂತೆ ವಿವಿಧ ಪಾಸುಗಳನ್ನು ಆನ್ ಲೈನ್ ಮೂಲಕ ಮಾರಾಟ ಮಾಡಲಾಗುತ್ತಿದೆ. ಸೆ.೨೬ರ ಇಂದಿನಿಂದ ದಸರಾ ಟಿಕೆಟ್ ಮಾರಾಟ ಆರಂಭಗೊಳ್ಳಲಿದೆ.

ಈ ಕುರಿತಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆನ್ ಲೈನ್ ಮುಖಾಂತರ ದಸರಾ ಗೋಲ್ಡ್ ಕಾರ್ಡ್ ಹಾಗು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ೫ ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ ೨೬ ರಿಂದ ೩೦ ರವರೆಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದರು.

ಪ್ರತಿನಿತ್ಯ ೧೦೦೦ ದಿಂದ ೧೫೦೦ ಗೋಲ್ಡ್ ಕಾರ್ಡ್ ಗಳು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆ.೨೬ರಿಂದ ೩೦ರವರೆಗೆ ಒಟ್ಟು ಐದು ದಿನಗಳ ಕಾಲ ಆನ್ ಲೈನ್ ಮೂಲಕ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ಗೆ ೬೫೦೦ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ ೩೫೦೦ ರೂಪಾಯಿ ನಿಗದಿ ಪಡಿಸಲಾಗಿದೆ. ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ ೧೦೦೦ ರೂಪಾಯಿ ನಿಗದಿ ಮಾಡಲಾಗಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಅವರು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular