ಗುಂಡ್ಲುಪೇಟೆ: ಕೇಂದ್ರ ಸರ್ಕಾರದ 9 ವರ್ಷದ ಸಾಧನೆ ತಿಳಿಸುವ ಮಹಾ ಸಂಪರ್ಕ ಅಭಿಯಾನಕ್ಕೆ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಚಾಲನೆ ನೀಡಿದರು.
ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾ ಸಂಪರ್ಕ ಅಭಿಯಾನವನ್ನು ಕರಪತ್ರವನ್ನು ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷ ತುಂಬಿದೆ. ಮೋದಿ ಆಡಳಿತದ ಅವಧಿಯಲ್ಲಿ ಭಾರತ ವಿಶ್ವ ಗುರುವಾಗಿದೆ. ಜೊತೆಗೆ ಮುಂದುವರೆದ ದೇಶಗಳ ಪಟ್ಟಿಯಲ್ಲಿ ಭಾರತವೂ ಕೂಡ ಮುಂದೆ ಇದೆ. ಇದನ್ನೆಲ್ಲ ಜನರಿಗೆ ಬೂತ್ ಮಟ್ಟದಲ್ಲಿ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಸಲಹೆ ನೀಡಿದರು.
ದೇಶಕ್ಕೆ ಪ್ರಧಾನ ಮೋದಿ ಅನಿವಾರ್ಯವಾಗಿರುವ ಹಿನ್ನೆಲೆ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕರ ಹಿಡಿಯುವ ನಿಟ್ಟಿನಲ್ಲಿ ಎಲ್ಲರೂ ಈಗಿನಿಂದಲೇ ಕಾರ್ಯ ಪ್ರೌವೃತ್ತರಾಗಬೇಕು. ಆ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಅಧಿಕ ಸ್ಥಾನ ಲೋಕಾಸಭೆ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಬೇಕು ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲಿಷ್ಟವಾಗಿದೆ. ಸಣ್ಣಪುಟ್ಟ ತಪ್ಪುಗಳಿಂದ ಬಿಜೆಪಿಗೆ ಹಿನ್ನಡೆಯಾಗಿದೆ. ಆದರೆ ಮುಂಬರುವ ಚುನಾವಣೆಗಳಲ್ಲಿ ತಪ್ಪುಗಳಿಗೆ ಆಸ್ಪದ ನೀಡದೆ ಲೋಕಾಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಎಲ್ಲರೂ ಶ್ರಮ ಪಡೋಣ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಂಡನಪುರ, ಅಣ್ಣೂರುಕೇರಿ, ಬನ್ನಿತಾಳಪುರ, ಕೆಲಸೂರು, ಬಲಚವಾಡಿ, ತೆರಕಾಣಾಂಬಿ, ಬೊಮ್ಮನಹಳ್ಳಿ, ವಡ್ಡಗೆರೆ, ಬೊಮ್ಮಲಾಪುರ, ಕೊಡಸೂಗೆ, ಬಾಚಹಲ್ಳಿ ಗ್ರಾಮ ಪಂಚಾಯತಿ ವ್ಯಾಪಿಯಲ್ಲಿ ಮನೆ ಮನೆಗೆ ಕರಪತ್ರ ಹಂಚಲಾಯಿತು.
ಈ ವೇಳೆ ಶಿಂಡನಪುರ ಮಂಜುನಾಥ್, ಮಹದೇವಪ್ರಸಾದ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.