ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಕೆ.ಆರ್. ನಗರ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಗಳಿಗೆ ಅ. ೨೮ ರಂದು ಚುನಾವಣೆ ನಡೆಯಲಿದೆ ಎಂದು ಅಧ್ಯಕ್ಷ ಚಿಕ್ಕಹನಸೋಗೆ ಸಿ.ಜೆ. ಅರುಣ್ ಕುಮಾರ್ ತಿಳಿಸಿದರು.
ರಾಜ್ಯ ಸಂಘದ ಆದೇಶದ ಮೇರೆಗೆ ಈಗಾಗಲೇ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ತಿಂಗಳಾಂತ್ಯದ ವೇಳೆಗೆ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ನಾಮಪತ್ರ ಸ್ವೀಕೃತಿ ದಿನಾಂಕ ಪ್ರಕಟಿಸಲಾಗುತ್ತದೆ ಎಂದರು.
ಈಗಾಗಲೇ ಇಲಾಖಾವಾರು ನಿರ್ದೇಶಕ ಸ್ಥಾನಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಕೃಷಿ ಇಲಾಖೆಗೆ ಒಂದು ನಿರ್ದೇಶಕ ಸ್ಥಾನ, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆಗೆ ಒಂದು, ಕಂದಾಯ ಇಲಾಖೆಗೆ ೨, ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗೆ ಒಂದು, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಪಿಎಂಜಿಎಸ್ಟ್ ಮತ್ತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಗೆ ಒಂದು ಸ್ಥಾನ ನಿಗದಿ ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದರ ಜತೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ೩ ಸ್ಥಾನ, ಪ್ರೌಢಶಾಲಾ ಶಿಕ್ಷಕರಿಗೆ ೧ ಸ್ಥಾನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಕಛೇರಿಗೆ ೧ ಸ್ಥಾನ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಗೆ ೧ ಸ್ಥಾನ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಇಲಾಖೆಗೆ ೧ ಸ್ಥಾನ, ಅರಣ್ಯ ಇಲಾಖೆಗೆ ೧ ಸ್ಥಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ೪ ಸ್ಥಾನ, ತೋಟಗಾರಿಕಾ ಮತ್ತು ರೇಷ್ಮೆ ಇಲಾಖೆಗೆ ೧ ಸ್ಥಾನ, ಇದರೊಂದಿಗೆ ಖಜಾನೆ ಇಲಾಖೆಗೆ ೧ ಸ್ಥಾನ ಮೀಸಲಾಗಿದೆ ಎಂದು ಅವರು ತಿಳಿಸಿದರು.
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ನೊಂದಣಿ ಮುದ್ರಾಂಕ ಇಲಾಖೆಗೆ ೧ ಸ್ಥಾನ, ನ್ಯಾಯಾಂಗ ಇಲಾಖೆಗೆ ೧ ಸ್ಥಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ೨ ಸ್ಥಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ೧ ಸ್ಥಾನ, ಮೀನುಗಾರಿಕೆ, ತೂಕ ಮತ್ತು ಅಳತೆ ಇಲಾಖೆ ಹಾಗೂ ಸಾರಿಗೆ ಇಲಾಖೆಗೆ ೧ ಸ್ಥಾನ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆಗೆ ೧ ಸ್ಥಾನ, ಅಬಕಾರಿ ಮತ್ತು ವಾಣಿಜ್ಯ ತೆರಿಗೆ ಇಲಾಖೆಗೆ ೧ ಸ್ಥಾನ ನೀಡಲಾಗಿದೆ ಎಂದು ಅವರು ಹೇಳಿದರು.
ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಗೆ ೧ ಸ್ಥಾನ, ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋದನೆ ಹಾಗೂ ಸಾಂಖ್ಯಿಕ ಇಲಾಖೆಗೆ ೨ ಸ್ಥಾನ ಮೀಸಲಾಗಿದ್ದು ಇವುಗಳೊಂದಿಗೆ ಮೇಲೆ ಹೇಳದಿರುವ ಮತ್ತು ಸೇರಿಸದಿರುವ ಇತರೆ ಇಲಾಖೆಗಳಿಗೆ ೩ ಸ್ಥಾನಗಳನ್ನು ನಿಗಧಿ ಮಾಡಲಾಗಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಶಾಖೆಯ ಕಾರ್ಯಕಾರಿ ಸಮಿತಿಯ ಆದೇಶದಂತೆ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.