ಮೈಸೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೆ.೨೭, ೨೮ ಮತ್ತು ೨೯ ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ ೨೭ ರಂದು ಬೆಳಗ್ಗೆ ೧೦.೨೫ ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ ೧೦.೪೫ ಗಂಟೆಗೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಆಯೋಜಿಸಿರುವ ಪ್ರವಾಸೋದ್ಯಮ ಮತ್ತು ಶಾಂತಿ ಘೋವಾಕ್ಯದಡಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಯ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ೧೧:೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಸೆಪ್ಟೆಂಬರ್ ೨೮ ರಂದು ಬೆಳಗ್ಗೆ ೧೦ ಗಂಟೆಗೆ ಸಿದ್ದಾರ್ಥನಗರದ ಹೋಟೆಲ್ ಮೈಸೂರು ರೇಡಿಯನ್ಸ್ ಉದ್ಘಾಟನೆಯನ್ನು ಮಾಡಲಿದ್ದು, ೧೧ ಗಂಟೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩:೦೦ ಗಂಟೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ ವತಿಯಿಂದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಗ್ರಂಥಾಲಯ ಕಟ್ಟಡದಲ್ಲಿ ಆಯೋಜಿಸಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಮಾರೋಪ ಸಮಾರಂಭ ಹಾಗೂ ಸಂಸ್ಥೆಗೆ ಸೇರಿದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೆಪ್ಟೆಂಬರ್ ೨೯ ರಂದು ಬೆಳಗ್ಗೆ ೧೧:೦೦ ಗಂಟೆಗೆ ಮೈಸೂರು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆಯನ್ನು ಮಾಡಲಿದ್ದು, ಸಂಜೆ ೪:೦೦ ಗಂಟೆಗೆ ಆಶೋಕಪುರಂ ನ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.