Sunday, April 20, 2025
Google search engine

Homeರಾಜ್ಯಬಿಜೆಪಿ ಮಾಜಿ ಶಾಸಕ ಲಕ್ಷ್ಮೀ ನಾರಾಯಣ ನಿಧನ

ಬಿಜೆಪಿ ಮಾಜಿ ಶಾಸಕ ಲಕ್ಷ್ಮೀ ನಾರಾಯಣ ನಿಧನ

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ಅವರು ಇಂದು ಶುಕ್ರವಾರ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ ವಯಸ್ಸಾಗಿತ್ತು.

ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. ೨೦೦೮ ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ೪.೩೦ ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular