ಮೈಸೂರು: ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಯುವ ಭಾರತ್ ಸಂಘಟನೆ ವತಿಯಿಂದ ಕ್ರಾಂತಿಕಾರಿ ಮಹಾನ್ ದೇಶಭಕ್ತ ಭಗತ್ ಸಿಂಗ್ ರವರ 117ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಸಿಹಿ ವಿತರಿಸಿ ಮಾತನಾಡಿದ ಮಾಜಿ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಯುವಕರಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಕಿಚ್ಚು ಹಚ್ಚಲು ಕಾರಣಕರ್ತರಾದವರೇ ಭಗತ್ ಸಿಂಗ್ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾಜಿ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್, ಯುವ ಭಾರತ್ ಸಂಘಟನೆ ಅಧ್ಯಕ್ಷರಾದ ಜೋಗಿ ಮಂಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸುರೇಶ್, ಅಜಯ್ ಶಾಸ್ತ್ರಿ, ವಿಘ್ನೇಶ್ವರ ಭಟ್, ಶ್ರೀನಿವಾಸ್, ಚರಣ್, ರಾಮು, ಸುಚೇಂದ್ರ, ವಿನೋದ್ ಅರಸ್, ಸುದರ್ಶನ್, ಅಂಜು, ರಕ್ಷಿತ್, ಶ್ರೀನಿವಾಸ್, ಹಾಗೂ ಇನ್ನಿತರರು ಹಾಜರಿದ್ದರು.