ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಶಂಕಿತ ಡೆಂಗ್ಯೂ ಜ್ವರಕ್ಕೆ ೫ ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ ೫ ವರ್ಷದ ಬಾಲಕ ಪ್ರದೀಪ್ ಆಚಾರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಪುಟಾಣಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸಿದ್ದಮ್ಮನಹಳ್ಳಿ ಗ್ರಾಮದ ೨೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬಳ್ಳಾರಿಯ ವಿಮ್ಸ್, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಜನರು ಪಡೆದಿದ್ದರೇ, ಕೆಲವರು ಚಿಕಿತ್ಸೆಯ ನಂತ್ರ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಆರೋಗ್ಯ ಇಲಾಖೆಯಿಂದ ಸಿದ್ದಮ್ಮನಹಳ್ಳಿ ಗ್ರಾಮದಲ್ಲಿನ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ಸೊಳ್ಳೆನಿಯಂತ್ರಣಕ ಔಷಧ ಸೇರಿದಂತೆ ಡೆಂಗ್ಯೂ ನಿಯಂತ್ರಣ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ.