Wednesday, April 16, 2025
Google search engine

Homeಸ್ಥಳೀಯಮುಡಾ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮುಡಾ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು : ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಭಾನುವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.

ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ

ಅಕ್ಟೋಬರ್ ೨ ರಂದು ದಸರಾ ಸಿದ್ದತೆ ಗಳ ವೀಕ್ಷಣೆ: ದಸರಾ ಉತ್ಸವದ ಸಿದ್ಧತೆಗಳ ಪರ್ತಕರ್ತರಿಗೆ ಮಾಹಿತಿ ನೀಡುತ್ತಾ, ದಸರಾ ಉತ್ಸವಗಳ ಸಿದ್ದತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ ೨ ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular