ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಗ್ರಾಮ ಪಂಚಾಯತಿ ಅಭಿವೃದ್ಧಿಯ ವಿವಿಧ ಕಾರ್ಯಕ್ರಮಗಳನ್ನು ಫಲಾನುಭವಿಗಳನ್ನು ಗುರುತಿಸುವ ಮೂಲಕ ಯೋಜನೆಗಳನ್ನು ಪೂರೈಸಲಾಗುವುದು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಕನ್ಯಾ ಕೃಷ್ಣನಾಯಕ ಹೇಳಿದರು.
ಕೆ.ಆರ್.ನಗರ ತಾಲೂಕಿನ ಮಾವತ್ತೂರು ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗದ ಆವರಣದಲ್ಲಿ ವಾರ್ಡ್ ಸಭೆ ಮತ್ತು ಗ್ರಾಮ ಸಭೆ ಹಾಗೂ ಜಮಾಬಂದಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯಾವುದೇ ಒಂದು ಗ್ರಾಮಕ್ಕೆ ಮೊದಲು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿದರೆ ಆ ಗ್ರಾಮವು ಪೂರಕ ಅಭಿವೃದ್ಧಿ ಯಡೆಗೆ ಸಾಗುತ್ತದೆ ಎಂದು ವಿವರಿಸಿದರು.
ನೋಡಲ್ ಅಧಿಕಾರಿ ಹಾಗೂ ಅಕ್ಷರ ದಾಸೋಹ ಪ್ರಭಾರ ಸಹಾಯಕ ನಿರ್ದೇಶಕರಾದ
ಪಿ.ಸ್ವಾಮಿಗೌಡ ಮಾತನಾಡಿ ಗ್ರಾಮ ಯಾವುದೇ ಯೋಜನೆಗಳು ಅನಿಷ್ಠಾನವಾಗಬೇಕದರೆ ಸಕಾಲದಲ್ಲಿ ಒದಗಿಸಬೇಕು ಹಾಗೂ ಸಾರ್ವಜನಿಕರು ತಮ್ಮ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಂಡು ಸಾಂಕ್ರಾಮಿಕ ರೋಗಗಳಿಂದ ದೂರವಿರಬೇಕೆಂದು ತಿಳಿಸಿದರು.
ಸರ್ಕಾರದ ಯೋಜನೆಯನ್ನು ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆಯನ್ನು ವಿತರಿಸಲಾಗುತ್ತಿತ್ತು ಆದರೆ ಇನ್ನು ಮುಂದೆ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು,ಚಕ್ಕೆ ಮಿಠಾಯಿಯನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು, ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಎದುರಾಗುತಿದ್ದು ಮಕ್ಕಳ ಆರೋಗ್ಯದಲ್ಲಿ ಕುಂಠಿತವಾಗಿದೆ ಇದನ್ನು ನೀಗಿಸಲು ಸರ್ಕಾರ ಮಹತ್ವದ ಯೋಜನೆಯಾಗಿದೆ ಎಂದು ತಿಳಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜೆ.ಎಲ್.ಧನಂಜಯ ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಯಲ್ಲಿ ಕೆಲಸ ಮಾಡುವ ಒಬ್ಬ ಕಾರ್ಮಿಕನಿಗೆ ದಿನವೊಂದಕ್ಕೆ 340 ರೋಗಳಂತೆ ಕೂಲಿ ನೀಡುತ್ತಿದ್ದು ಕನಿಷ್ಠ ನೂರು ದಿನಗಳ ಕಾಲ ಕೆಲಸವನ್ನು ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ಮಳಲಿ, ಮಾರಗೌಡನಹಳ್ಳಿ, ಮಾವತ್ತೂರು,ಮಾದಳ್ಳಿ, ಐಚನಹಳ್ಳಿ ಗ್ರಾಮಗಳಲ್ಲಿ ಸಭೆ ನಡೆಸಿದ್ದು ಗ್ರಾಮಸ್ಥರಿಂದ ಸರ್ಕಾರದ ವತಿಯಿಂದ ನೀಡುವ ಮನೆ ನಿರ್ಮಾಣಕ್ಕೆ,ಕೊಟ್ಟಿಗೆ ನಿರ್ಮಾಣಕ್ಕೆ, ತೆಂಗಿನ ಗಿಡ ನಡೆಲು ನೀಡುವ ಸಹಾಯಧನಕ್ಕೆ ಸರಿ ಸುಮಾರು ಅರ್ಜಿಗಳು ಬಂದಿದ್ದು ಸರ್ಕಾರದ ನಿಯಮಾನುಸಾರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಸಹಾಯಕ ತೋಟಗಾರಿಕಾ ಅಧಿಕಾರಿ ಜಿ.ಜೆ.ಶಂಕರ್ ಮಾತನಾಡಿ ಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರು ಅತಿ ಹೆಚ್ಚು ತಂಬಾಕು ಬೆಳೆ ಬೆಳೆಯುತ್ತಿದ್ದು ಇದರ ಪರ್ಯಾಯ ಬೆಳೆಯಾಗಿ ತೆಂಗು, ಮಾವು,ಸಪೋಟ ಹಾಗೂ ತೋಟಗಾರಿಕಾ ಬೆಳೆಗಳನ್ನು ಬೆಳೆದರೆ ಸರ್ಕಾರದ ವತಿಯಿಂದ ಸಹಾಯಧನಗಳನ್ನು ನೀಡಲಾಗುವುದು ರೈತರು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸ ಬೇಕಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜ್ಯೋತಿ ಸದಸ್ಯರಾದ ದೇವಯ್ಯ, ಸ್ವಾಮಿ ಗೌಡ, ಕಾರ್ಯದರ್ಶಿ ಗೋಪಾಲಸ್ವಾಮಿ, ಸಿಬ್ಬಂದಿಗಳಾದ ಅರುಣ್ ಕುಮಾರ್, ಚಂದ್ರು, ಮಹದೇವ ನಾಯಕ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಇದ್ದರು.