ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 3ರಿಂದ 14ರವರೆಗೆ ನಡೆಯಲಿದ್ದು, ದಸರಾ ವಿಶೇಷ ಕಾರ್ಯಕ್ರಮವಾಗಿ ಅ. 6ರಂದು ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರುವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1991ರಿಂದ ಆರಂಭಗೊಂಡ ‘ಮಂಗಳೂರು ದಸರಾ ವೈಭವ’ವವು ಕುದ್ರೋಳಿಯ ಗೋಕರ್ಣನಾಥನ ಕೃಪೆಯೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಇದನ್ನು ಈ ಹಂತಕ್ಕೆ ಬೆಳೆಸಿದವರು ಜನರು ಎಂದರು.