ಮಂಗಳೂರು: ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರಕಿತು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ರೂವಾರಿ ಬಿ.ಜನಾರ್ದನ ಪೂಜಾರಿ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
ನವರಾತ್ರಿ ಪ್ರಯುಕ್ತ ಶಾರದಾ ಮಾತೆಗೆ ಇದೇ ೧೩ರವರೆಗೆ ನಿತ್ಯವೂ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರಗಳು ನಡೆಯಲಿವೆ.
ನವರಾತ್ರಿ ಹಾಗೂ ದಸರಾ ಮಹೋತ್ಸವದ ಅಂಗವಾಗಿ ನಗರವು ಕಳೆ ಗಟ್ಟಿದೆ. ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ. ದಸರಾ ಮೆರವಣಿಗೆ ಸಾಗುವ ನಗರದ ಬೀದಿಗಳಲ್ಲಿ ಮಾಡಲಾದ ವಿದ್ಯುತ್ ದೀಪಾಲಂಕಾರ ಮಂಗಳೂರು ದಸರಾ ಸಂಭ್ರಮಕ್ಕೆ ವಿಶೇಷ ಕಳೆ ತಂದಿದೆ.