ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2024ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯ ಪೋಸ್ಟರನ್ನು ಅರಣ್ಯ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಶಿಕ್ಷಣ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸ್ಪರ್ಧೆಯ ಮಾಹಿತಿ ನೀಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ.
ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 1000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಎರಡನೇ ಬಹುಮಾನ 500 ರೂ ನಗದು ಪಾರಿತೋಷಕ ಹಾಗೂ ಪ್ರಮಾಣಪತ್ರ, ಮೂರನೇ ಬಹುಮಾನ 300ರೂ ನಗದು ಪಾರಿತೋಷಕ ಹಾಗೂ 10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು . ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು.
ಕಡೆಯ ದಿನಾಂಕ 13/10/2024 ರ ಒಳಗೆ 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಳಿಸಿಕೊಡಬೇಕು. ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರು ಬಲ್ಕಿಷ್ ಬಾನು , ಶಾಸಕರಾದ ಜಿ.ಎಸ್ ಶ್ರೀ ನಿವಾಸ್, ದುರ್ಗಾ ಫೌಂಡೇಶನ್ ಅಧ್ಯಕ್ಷ ರಾದ ರೇಖಾ ಶ್ರೀ ನಿವಾಸ್, ವೈದ್ಯಧಿಕಾರಿಗಳಾದ ಶ್ರೀನಿವಾಸ್ ಆಚಾರ್ಯ, ಅಶ್ವಿನಿ ಗೌಡ, ರೇಣುಕಾ ಹೊರಕೇರಿ,
ಯಶವಂತ್, ಹಾಗೂ ಇನ್ನಿತರರು ಹಾಜರಿದ್ದರು.