Saturday, April 19, 2025
Google search engine

Homeರಾಜ್ಯಮೈಸೂರು ದಸರಾ ವೀಕ್ಷಣೆಗೆ ತೆರಳೋರಿಗೆ ದಸರಾ ವಿಶೇಷ, ಬಸ್ ಕಾರ್ಯಾಚರಣೆಗೆ ಚಾಲನೆ

ಮೈಸೂರು ದಸರಾ ವೀಕ್ಷಣೆಗೆ ತೆರಳೋರಿಗೆ ದಸರಾ ವಿಶೇಷ, ಬಸ್ ಕಾರ್ಯಾಚರಣೆಗೆ ಚಾಲನೆ

ಬೆಂಗಳೂರು: ಮೈಸೂರು ದಸರಾ ವೀಕ್ಷಣೆಗೆ ತೆರಳುತ್ತಿರೋರಿಗೆ KSRTCಯಿಂದ ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ.

ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ಚಾಲನೆ ನೀಡಲಾಯಿತು.

ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ.

ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ. ಈ ಸಂದರ್ಭದಲ್ಲಿ ನಿಗಮದ ಹಿರಿಯ ಅಧಿಕಾರಿಗಳು ವಿಭಾಗೀಯ ನಿಯಂತ್ರಣಾಧಿಕಾರಿ ಬೆಂಗಳೂರು ಕೇಂದ್ರಿಯ ವಿಭಾಗ ಮತ್ತು ಕೆಂಪೇಗೌಡ ಬಸ್ ನಿಲ್ದಾಣ ರವರು ಹಾಜರಿದ್ದರು.

RELATED ARTICLES
- Advertisment -
Google search engine

Most Popular