Sunday, April 20, 2025
Google search engine

Homeರಾಜ್ಯಅ.18ರ ಸಚಿವ ಸಂಪುಟ ಸಭೆಗೆ ಜಾತಿ ಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಅ.18ರ ಸಚಿವ ಸಂಪುಟ ಸಭೆಗೆ ಜಾತಿ ಗಣತಿ ವರದಿ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಮಂಡಿಸಲಾಗಿತ್ತು. ಇದನ್ನು ಇದೇ ಅಕ್ಟೋಬರ್.18ರಂದು ನಡೆಯುವ ಸಂಪುಟ ಸಭೆಯ ಮುಂದೆ ತರುತ್ತೇನೆ. ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಜಾತಿಗಣತಿ ವರದಿ ಜಾರಿ ವಿಚಾರವಾಗಿ ಸಂಸದರು, ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಜಾತಿಗಣತಿ ವರದಿ ಜಾರಿ ಮಡಾುವಂತೆ ಮನವಿ ಪತ್ರ ನೀಡಿದ್ದಾರೆ ಎಂದರು.

ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಲಾಗಿದೆ. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿದೆ. ಆದರೇ ಜಾತಿಗಣತಿ ವರದಿಯನ್ನು ನಾನೇ ಇನ್ನೂ ನೋಡಿಲ್ಲ ಎಂಬುದಾಗಿ ತಿಳಿಸಿದರು.

ಅಕ್ಟೋಬರ್.10ರ ಬದಲಾಗಿ 18ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಅಂದಿನ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಮಂಡಿಸಲಾಗುತ್ತದೆ. ಜಾತಿಗಣತಿಯ ವರದಿ ಜಾರಿಯ ಬಗ್ಗೆ ಚರ್ಚಿಸಲಾಗುತ್ತದೆ. ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

RELATED ARTICLES
- Advertisment -
Google search engine

Most Popular