ಮಂಗಳೂರು (ದಕ್ಷಿಣ ಕನ್ನಡ) ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.
ಅವರ ಕುಟುಂಬದ ಮೂಲ ಮನೆ ಚೊಕ್ಕಬೆಟ್ಟು ಎಂಬಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಉದ್ದನೆಯ ಸಾಲುಗಳಲ್ಲಿ ಜನ ನಿಂತಿದ್ದಾರೆ. ಬಳಿಕ ಕೃಷ್ಣಾಪುರ ಈದ್ಗಾದಲ್ಲೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆ ಬಳಿಕ ಅಲ್ಲಿನ ಖಬರ್ ಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಜೆ 6 ಗಂಟೆಗೆ ಮೊದಲು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.