Saturday, April 19, 2025
Google search engine

Homeರಾಜಕೀಯಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರ ರಿಸಲ್ಟ್ನಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ. ೩೭೦ ವಿಧಿ ಬಗ್ಗೆ ಮಾತನಾಡಿದರು. ಕಾಶ್ಮೀರ ಫೈಲ್ಸ್ ಫಿಲ್ಮ್ ಮಾಡಿದ್ರು. ಅದು ನಿರ್ಮಾಪಕ ಮತ್ತು ನಿರ್ದೇಶಕರಿಗೆ ಮಾತ್ರ ಲಾಭ ಆಗಿದ್ದು ಹೊರತು, ಇದರಿಂದ ಜಮ್ಮು ಕಾಶ್ಮೀರ ಜನರಿಗೆ ಏನು ಲಾಭ ಆಗಲಿಲ್ಲ. ಈಗ ಅಲ್ಲಿನ ಜನ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಬಿಜೆಪಿಯ ವಿಭಜನೆ ನೀತಿ ವರ್ಕ್ ಆಗ್ತಿಲ್ಲ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಹರಿಯಾಣ ಚುನಾವಣಾ ಫಲಿತಾಂಶ ಅಂತಿಮ ಆಗಿಲ್ಲ. ನಮಗೆ ವಿಶ್ವಾಸ ಇದೆ ನಾವು ಮುನ್ನಡೆ ಸಾಧಿಸುತ್ತೇವೆ. ಕ್ರೀಡಾಪಟುಗಳ ಹೋರಾಟ ಸಾಕಷ್ಟು ಪ್ರಭಾವ ಬೀರಿದೆ. ಹಿಂದಿ ಪ್ರದೇಶಗಳಲ್ಲಿ ಗೆಸ್ ಮಾಡುವುದು ಸ್ವಲ್ಪ ಕಷ್ಟ. ಮೊನ್ನೆ ಉತ್ತರ ಪ್ರದೇಶದಲ್ಲಿ ಗೆಲ್ತಾರೆ ಅಂದ್ರು ಗೆದ್ದಿಲ್ಲ. ನನ್ನ ಮಾಹಿತಿ ಪ್ರಕಾರ ಹರಿಯಾಣದಲ್ಲಿ ೫೩ ಸೀಟು ಬರುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

RELATED ARTICLES
- Advertisment -
Google search engine

Most Popular