ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಅ. ೧೦ ಮತ್ತು ೧೧ ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಇಂದು-ನಾಳೆ ಮಧ್ಯಾಹ್ನ ೩.೩೦ ಗಂಟೆಗೆ ಮೈಸೂರಿಗೆ ಆಗಮಿಸುವರು.
ಸಂಜೆ ೪ ಗಂಟೆಗೆ ಚಾಮುಂಡಿ ಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಸಂಜೆ ೫.೧೫ ಕ್ಕೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಲಿದ್ದಾರೆ. ೫.೩೦ ಕ್ಕೆ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ ೧೧ ರಂದು ಬೆಳಗ್ಗೆ ೮.೩೦ ಗಂಟೆಗೆ ಅರಮನೆ ಆವರಣದಲ್ಲಿ ಮಾವುತರಿಗೆ ಉಪಹಾರವನ್ನು ನೀಡಲಿದ್ದಾರೆ ಎಂದು ಖಾಸಗಿ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.