ಬೆಂಗಳೂರು: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅ.೧೪ ರಂದು ಆದೇಶ ಪ್ರಕಟಿಸುವುದಾಗಿ ಹೇಳಲಾಗಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಸೋಮವಾರದ ವರೆಗೆ ಕಾಯ್ದಿರಿಸಿದೆ.
ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರವಾಗಿ ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ನ್ಯಾ. ಜೈಶಂಕರ್ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ, ಅ.೧೪ ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಇಂದು ಗುರುವಾರ ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಮತ್ತು ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು. ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಕೋರ್ಟ್ ಅ.೧೪ ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ಇದೀಗ ಅದೇ ದಿನ ದರ್ಶನ್ ಕೇಸ್ ಆದೇಶವನ್ನು ಪ್ರಕಟಿಸುವುದಾಗಿ ತಿಳಿಸಿದೆ.