ಬೆಂಗಳೂರು : ನಾಳೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಅಂದರೆ ಅ. ೧೩ ರವರೆಗೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜಂಬೂಸವಾರಿ, ವಿಜಯದಶಮಿ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ನಾಳೆ ಅಂದರೆ ಅ .೧೧ರಂದು ಬೆಳಿಗ್ಗೆ ೧೦:೨೫ ಕ್ಕೆ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಲಿದ್ದಾರೆ. ಅಕ್ಟೋಬರ್ ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಕ್ಟೋಬರ್ ೧೨ ರಂದು ಮಧ್ಯಾಹ್ನ ೧:೪೧ ರಿಂದ ೨:೧೦ರವರೆಗೆ ನಂದಿ ದ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ.
ಅರಮನೆಯ ಬಲರಾಮದ್ವಾರದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಅದೇ ರೀತಿ ಅ ,೧೨ ರಂದು ಸಂಜೆ ೪ ರಿಂದ ೪:೩೦ವರೆಗೆ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯಲ್ಲಿ ಅಸೀನರಾಗುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದು, ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ ೭ ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದೆ. ಟಾರ್ಚ್ ಲೈಟ್ ಪೆರೇಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಅ .೧೩ ರಂದು ಬೆಳಿಗ್ಗೆ ೧೧ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಅ೧೩ ರಂದು ಬೆಳಿಗ್ಗೆ ೧೧:೩೦ ಕ್ಕೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ.