ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ೯ ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾ ದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದರು.