Monday, April 21, 2025
Google search engine

Homeರಾಜ್ಯಹುಬ್ಬಳ್ಳಿ ಗಲಭೆ ಪ್ರಕರಣ : 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಗೃಹ ಸಚಿವ...

ಹುಬ್ಬಳ್ಳಿ ಗಲಭೆ ಪ್ರಕರಣ : 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್‌ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು.

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ ಎಂದು ಹೇಳಿದರು.

ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದರು.

RELATED ARTICLES
- Advertisment -
Google search engine

Most Popular