ಮಂಗಳೂರು (ದಕ್ಷಿಣ ಕನ್ನಡ) : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಮೃತರನ್ನು ಭಾಗೀರಥಿ (58 ) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.