ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13 ರಂದು ಮತದಾನ ನಡೆಯಲಿದೆ.
ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ. ನ 13 ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರ, ತುಕಾರಂರಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದೆ.
ಅಕ್ಟೋಬರ್ 18ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 25 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೇ ದಿನವಾಗಿದೆ.