ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸಂದರ್ಭದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದರು. ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಸಹನಾ ಅವರಿಗೆ ಬುಧವಾರ (ಅ16)ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ನಟ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ ಜೂನ್ 8 ರಂದು ಬರ್ಬರವಾಗಿ ಹತ್ಯೆ ಮಾಡಿದ್ದರು.