ಬೆಂಗಳೂರು: ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬುಧವಾರ ಬೆಳಿಗ್ಗೆ ಬಿಡುಗಡೆಯಾದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನಿನ್ನೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ತಲುಪಿತ್ತು. ಹೀಗಾಗಿ ನಿನ್ನೆ ಬಿಡುಗಡೆ ಆಗಿರಲಿಲ್ಲ. ಇಂದು ಬಿಡುಗಡೆಯಾಗುತ್ತಿದ್ದಂತೆ ಕಾರಿನಲ್ಲಿ ತಮ್ಮ ಮನೆಗೆ ಶಾಸಕ ಮುನಿರತ್ನ ತೆರಳಿದ್ದಾರೆ. ಸದ್ಯ ಮುನಿರತ್ನ ಬಿಡುಗಡೆ ಹಿನ್ನಲೆ ವೈಯಾಲಿಕಾವಲ್ ನಿವಾಸದ ಬಳಿ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.