Saturday, April 19, 2025
Google search engine

Homeಸ್ಥಳೀಯಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧಿಸಿ: ವಿಕ್ರಂ ಅಯ್ಯಂಗಾರ್ ಒತ್ತಾಯ

ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧಿಸಿ: ವಿಕ್ರಂ ಅಯ್ಯಂಗಾರ್ ಒತ್ತಾಯ

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯಬೇಕು ಹಾಗೂ ಅವುಗಳನ್ನು ನಿಷೇಧಿಸಬೇಕು ಎಂದು ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದರು.

ಈಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿಸಿದರು.

ಆನ್‌ಲೈನ್ ಬೆಟ್ಟಿಂಗ್ ಜಾಲಕ್ಕೆ ಸಿಲುಕಿರುವವರು ಬಹುತೇಕ ಯುವಕ–ಯುವತಿಯರೇ ಆಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಾವಿರಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಉನ್ನತ ಸ್ಥಾನದಲ್ಲಿರುವ ತಾವು ಜಾಣ ಮೌನಕ್ಕೆ ಶರಣಾಗಿರುವುದು ತಮ್ಮ ಹುದ್ದೆಗಳಿಗೆ ಘನತೆ ತರುವುದಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆ ನಡೆಸುತ್ತಿದ್ದ ಆನ್‌ಲೈನ್ ಬುಕ್ಕಿಗಳ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

RELATED ARTICLES
- Advertisment -
Google search engine

Most Popular