Saturday, April 19, 2025
Google search engine

Homeರಾಜ್ಯಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮೂರು ತಂಡಗಳು ಕ್ಷೇತ್ರಗಳಿಗೆ ತೆರಳಿ ಸ್ಥಳಿಯರ ಅಭಿಪ್ರಾಯ ಪಡೆದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಿದ್ದಾರೆ. ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿಯೂ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡುವ ಕೆಲಸ ಆಗಿದೆ ಎಂದು ಹೇಳಿದರು.

ಶಿಗ್ಗಾವಿ ನಾನು ಪ್ರತಿನಿಧಿಸುವ ಕ್ಷೇತ್ರ ಆಗಿರುವುದರಿಂದ ನನ್ನ ಮೇಲೆ ಹೆಚ್ಚು ಜವಾಬ್ದಾರಿ ಇದೆ. ನಮ್ಮ ಪಕ್ಷದ ಉಸ್ತುವಾರಿ ಕಾರ್ಯದರ್ಶಿ ರಾಧಾ ಮೋಹನ್ ಅಗರವಾಲ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಸ್ಥಳೀಯರ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ. ಅಲ್ಲಿ ಚುನಾವಣೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಮಗೆ ದೊಡ್ಡ ಪ್ರಮಾಣದ ಬೆಂಬಲ ಸಿಗುವ ಭರವಸೆ ಇದೆ. ನಾನು ಸ್ಪರ್ಧೆ ಮಾಡಿದಾಗ ಸಿಕ್ಕ ಸುಮಾರು ೩೬ ಸಾವಿರ ಗೆಲುವಿನ ಅಂತರ ಈ ಬಾರಿಯೂ ಸಿಗುವ ನಂಬಿಕೆ ಇದೆ ಎಂದು ಹೇಳಿದರು.

ಟಿಕೆಟ್ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ಆಕಾಂಕ್ಷಿಗಳ ಪಟ್ಟಿ ಕೂಡ ಕೊಟ್ಟಿದ್ದಾರೆ. ಎರಡು ಮೂರು ದಿನಗಳಲ್ಲಿ ರಾಜ್ಯ ಕೋರ್ ಕಮಿಟಿ ಚರ್ಚೆ ಮಾಡಿ ಹೈಕಮಾಂಡ್‌ಗೆ ಪಟ್ಟಿ ಕೊಡುತ್ತೇವೆ. ಕೇಂದ್ರ ನಾಯಕರ ಜೊತೆಯೂ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular