ದಾವಣಗೆರೆ : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಣೇಶನ ಮೂರ್ತಿಯ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 48 ಜನರಿಗೆ ಇಂದು ಕೋರ್ಟ್ ಜಾಮೀನು ನೀಡಿದೆ.
ಸೆ.19 ರಂದು ದಾವಣಗೆರೆಯ ಅರಳಿಮರ ಸರ್ಕಲ್ ನಲ್ಲಿ ಗಲಾಟೆ ನಡೆದಿತ್ತು. ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ, ಮುಸ್ಲಿಂ ಸೇರಿ 48 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಸೆ. 19 ರಂದು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 30 ಜನರನ್ನು ಬಂಧಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ಆರೋಪಿಗಳ ಮನೆಗೆ ತೆರಳಿ ಬಂಧಿಸಲಾಗಿತ್ತು.