Sunday, April 20, 2025
Google search engine

Homeರಾಜಕೀಯಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ: ಮುರುಗೇಶ್ ನಿರಾಣಿ

ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ: ಮುರುಗೇಶ್ ನಿರಾಣಿ

ನವದೆಹಲಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಶಿಗ್ಗಾಂವಿ ಕ್ಷೇತ್ರ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.

ಪಕ್ಷಕ್ಕಾಗಿ ದುಡಿದವರು ಅಲ್ಲಿದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.

RELATED ARTICLES
- Advertisment -
Google search engine

Most Popular