ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಸೋಮವಾರ ಭಾರೀ ಮಳೆಯಾಗುತ್ತಿದ್ದು, ನಗರದಲ್ಲಿ ಧಾರಾಕಾರ ಮಳೆಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಸೀಗೇಹಳ್ಳಿಯಲ್ಲಿ ಮಳೆಯಿಂದ ರಸ್ತೆ ಕಾಣದೇ ಬೈಕ್ ಸವಾರ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ.