ಚಿತ್ರದುರ್ಗ : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ ೧೩ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗದ ಚಳ್ಳೆಕೆರೆ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಿಪಿ ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಜೆಡಿಎಸ್ ನಾಯಕರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಮೊದಲು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಲಿ. ನಾವು ಕೂಡ ಇಂದು ಅಥವಾ ನಾಳೆ ಚನ್ನಪಟ್ಟಣದ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಲ್ಲಿ ಮಳೆ ಜಾಸ್ತಿಯಾಗಿದೆ. ಆದರೆ ಬೆಳೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ನಮ್ಮ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನಮ್ಮ ಸರ್ಕಾರ ಬೀಳಿಸಲು ಸಾವಿರ ಕೋಟಿ ರೂ. ಖರ್ಚೆಂದು ಯತ್ನಾಳ್ ಹೇಳಿದ್ದರು. ಸಾವಿರ ಕೋಟಿ ಬ್ಲಾಕ್ ಮನಿ ಅಲ್ಲವೇ ಅಷ್ಟೊಂದು ಹಣ ಎಲ್ಲಿಂದ ತರುತ್ತಾರೆ ಜೆಪಿಯವರು ಬ್ಲಾಕ್ ಮನಿ ಮಾಡಿದ್ದಾರೆ ಎಂದು ಕಿಡಿಕಾರಿದರು.