ಚನ್ನಪಟ್ಟಣ : ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಚಿಹ್ನೆ ಯಾವುದು ಎಂಬುದು ಇಂದು ಸಂಜೆ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ಸ್ಪರ್ಧೆ ಬಗ್ಗೆ ನಮ್ಮ ಮುಖಂಡರ ಅಭಿಪ್ರಾಯ ಮುಖ್ಯ, ಯಾವುದೇ ದುಡುಕಿನ ನಿರ್ಧಾರ ಮಾಡಿಲ್ಲ. ಗುರುವಾರ ಬೆಳಗ್ಗೆ ೧೧ ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಎಂದು ಸ್ಪಷ್ಟಪಡಿಸಿದ್ದಾರೆ.