ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ರದ್ದು ಕೋರಿ ಇಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರಗೆ ನೋಟಿಸ್ ನೀಡಿದೆ.
ಮಾಜಿ ಸಚಿವ ಬಿ.ನಾಗೇಂದ್ರಗೆ ಹೈಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಈ ಒಂದು ಜಾಮೀನು ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ.15 ರಂದು ವಿಚಾರಣೆ ನಿಗದಿಪಡಿಸಿ ವಿಚಾರಣೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಬಿ. ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ. ಈ ಹಿಂದೆ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದ್ದು, ಜಾಮೀನು ರದ್ದು ಕೋರಿ ಇಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.