Saturday, April 19, 2025
Google search engine

Homeರಾಜ್ಯ3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ; ಬಿ.ವೈ.ವಿಜಯೇಂದ್ರ

3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು ೩ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಎಂದು ಹೇಳಿದರು.

ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ನಮ್ಮೆಲ್ಲ ಪಕ್ಷದ ಹಿರಿಯರು ಸೇರಿದ್ದಾರೆ. ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಜೆಡಿಎಸ್ ಪಕ್ಷವೂ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಸಂಡೂರಿನಲ್ಲಿ ಹಿಂದೆಂದೂ ಬಿಜೆಪಿ ಕಮಲ ಅರಳಿಲ್ಲ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ, ಎಲ್ಲ ಶಾಸಕರು, ಮಾಜಿ ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಇಲ್ಲಿ ನಿಶ್ಚಿತವಾಗಿ ಬಿಜೆಪಿಯ ಕಮಲದ ಹೂ ಅರಳಲಿದೆ. ನಮ್ಮೆಲ್ಲರ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ೩ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ರಾಜ್ಯದ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಮತ್ತು ಯುವ ಮುಖಂಡ ಬಂಗಾರು ಹನುಮಂತು ಅವರು ಎಲ್ಲ ಪ್ರಮುಖರ ಸಮ್ಮುಖದಲ್ಲಿ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ರಾಜ್ಯ ರಾಜಕೀಯದ ದಿಕ್ಸೂಚಿಯನ್ನು ಬದಲಿಸುವ ಶಕ್ತಿ ಈ ೩ ಕ್ಷೇತ್ರಗಳ ಉಪ ಚುನಾವಣೆಗೆ ಇದೆ. ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು ರಾಜಕೀಯ ದಿಕ್ಕನ್ನು ಬದಲಿಸುವ ಶಕ್ತಿ ಹೊಂದಿವೆ. ರಾಜ್ಯದಲ್ಲಿ ರೈತರ ವಿರೋಧಿ ಸರಕಾರ ಇದೆ. ಬರಗಾಲ ಇದ್ದಾಗಲೂ ಈ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ನೆರೆ ಇದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಮೆಕ್ಕೆಜೋಳ, ಮೆಣಸಿನ ಕಾಯಿ, ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular