Saturday, April 19, 2025
Google search engine

Homeಅಪರಾಧತುಮಕೂರಿನಲ್ಲಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿ ಮಂಜುನಾಥ್ ಬಂಧನ

ತುಮಕೂರಿನಲ್ಲಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿ ಮಂಜುನಾಥ್ ಬಂಧನ

ತುಮಕೂರು: ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ (೨೯) ಬಂಧಿತ ಆರೋಪಿ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸರು ಆರೋಪಿ ಮಂಜುನಾಥ್ ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಂಜುನಾಥ್ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿಯಾಗಿದ್ದಾನೆ.

ತಾಲೂಕಿನ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ, ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ, ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಮೊಟ್ಟೆ ಹೊಡೆದಿದ್ದ. ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿನ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ್ದ. ಈ ಬಗ್ಗೆ ದೇವಸ್ಥಾನದ ಭಕ್ತರು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದಲ್ಲಿ ದೂರು ದಾಖಲಾಗಿತ್ತು. ಅ.೨೧ರಂದು ಆರೋಪಿ ಮಂಜುನಾಥನನ್ನು ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿದ್ದರು.

RELATED ARTICLES
- Advertisment -
Google search engine

Most Popular