ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಯಾವುದೇ ರೈತರಿಗೂ ನೋಟಿಸ್ ನೀಡಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟ ಪಡಿಸಿದ್ದಾರೆ.
ಇಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಕ್ಫ್ ಬೋರ್ಡ್ ನಿಂದ ಯಾರಿಗೂ ನೋಟಿಸ್ ನೀಡಿಲ್ಲ. ರೈತರಿಗೆ ಮಂಜೂರಾದ ಜಮೀನಿಗೆ ನೋಟಿಸ್ ನೀಡಿಲ್ಲ. ೧೨೧ ರೈತರಿಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ ವಾಪಾಸ್ಸು ನಾವು ಪಡೆಯುತ್ತೇವೆ ಎಂದರು. ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ಬಿಜೆಪಿಯವರು ಉದ್ದೇಶಪೂರ್ವಕವಾಗಿ ಗಲಭೆ ಏಳಿಸುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು.