Sunday, April 20, 2025
Google search engine

Homeರಾಜ್ಯಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ನೋಟಿಸ್: ಸಚಿವ ಎಂಬಿ ಪಾಟೀಲ್

ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ನೋಟಿಸ್: ಸಚಿವ ಎಂಬಿ ಪಾಟೀಲ್

ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ನೋಟಿಸ್ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ದಾಖಲೆ ಸಮೇತ ಟಾಂಗ್ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದ ಜೋರಾಗಿದ್ದು, ಆಸ್ತಿ ವಿಚಾರವಾಗಿ ಜಿಲ್ಲೆಯ ಹಲವು ರೈತರಿಗೆ ತಹಶೀಲ್ದಾರ್ ಕಚೇರಿಯಿಂದ ನೋಟಿಸ್ ನೀಡಲಾಗಿದೆ. ರೈತರಿಗೆ ನೋಟಿಸ್ ನೀಡಿದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರುತ್ತಿದೆ. ಇದೀಗ ಈ ವಿಚಾರವಾಗಿ ಎಂ ಬಿ ಪಾಟೀಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

೨೦೧೯ರಿಂದ ೨೦೨೨ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸತ್ಯ ಶೋಧನಾ ಸಮಿತಿ (ಅತ್ತು ಕರೆದು ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯ ಶೋಧನಾ ಸಮಿತಿ) ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ಕೊಟ್ಟಿರೋದಕ್ಕೆ ಉತ್ತರ ಕೊಡಲಿ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular