ರಾಮನಗರ, ಜು. ೧೫ :ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ ೨೦೨೨-೨೩ನೇ ಸಾಲಿನ ಸಾಂಸ್ಕೃತಿಕ, ಎನ್.ಎಸ್.ಎಸ್., ರೆಡ್‌ಕ್ರಾಸ್, ರೇಂರ‍್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಜು. ೧೭ರ ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಸಾರಿಗೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಅಧ್ಯಕ್ಷರಾದ ಹೆಚ್.ಎ ಇಕ್ಬಾಲ್ ಹುಸೇನ್ ಅವರು ಘನ ಉಪಸ್ಥಿತಿ ವಹಿಸುವರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಕೆ. ಸುರೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.