Sunday, April 20, 2025
Google search engine

Homeರಾಜ್ಯಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ: ಆರ್‌.ಅಶೋಕ್ ಆಗ್ರಹ

ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ: ಆರ್‌.ಅಶೋಕ್ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಸೇರಿದಂತೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಲವ್‌ ಜಿಹಾದ್‌ನಂತೆಯೇ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್‌ ಜಿಹಾದ್‌ ನಡೆಯುತ್ತಿದೆ. ಭೂಮಿಯನ್ನು ಹೇಗೆ ಕಬಳಿಸಬೇಕೆಂದು ಸಚಿವ ಜಮೀರ್‌ ಅಹ್ಮದ್‌ ಯೋಜನೆ ರೂಪಿಸಿದ್ದಾರೆ. ಇನ್ನೂ ಕೆಲವರು ಸಂಸತ್ತು ನಮ್ಮದು, ವಿಧಾನಸೌಧವೂ ನಮ್ಮದು ಎಂದಿದ್ದಾರೆ. ಮುಸ್ಲಿಂ ಮತಾಂಧರ ವಿರುದ್ಧ ಇದ್ದ ಕೇಸು ವಾಪಸ್‌ ಪಡೆಯುವುದು, ಭಯೋತ್ಪಾದನೆ, ಪಾಕಿಸ್ತಾನಕ್ಕೆ ಜೈಕಾರ ಮೊದಲಾದವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ದೂರಿದರು.

ವಕ್ಫ್‌ ಬೋರ್ಡ್‌ ರೈತರ ಜಮೀನುಗಳನ್ನು ಕಬಳಿಸುತ್ತಿದೆ. ಇದು ಭಾರತಕ್ಕೆ ಸೇರಿದ ಆಸ್ತಿ. ಕಂಡ ಜಮೀನುಗಳೆಲ್ಲ ತಮ್ಮದೇ ಎಂದು ಇವರು ಹೇಳುತ್ತಿದ್ದಾರೆ. ಕೆಲವು ಮತಾಂಧ ಅಧಿಕಾರಿಗಳು ಖಬರ್‌ಸ್ತಾನ, ವಕ್ಫ್‌ ಬೋರ್ಡ್‌ ಆಸ್ತಿ ಎಂದು ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ರೈತರ ಅನ್ನ ಕೀಳುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular