ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
ಮುಡಾದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಸಿರಿವತ್ಸ ಅವರು ಈ ಕೂಡಲೇ ೫೦:೫೦ ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್‌ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಬಿಜೆಪಿ ಶಾಸಕ ಶ್ರೀವತ್ಸ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ ೫೦:೫೦ ಅನುಪಾತದ ಸೈಟ್ ಹಿಂಪಡೆಯಲು ಕ್ರಮ ಕೈಗೊಳ್ಳಿ ಎಂದು ಸಿಎಂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೈಟ್ ಪಡೆದವರಿಗೆ ಇದೀಗ ಟೆನ್ಶನ್ ಶುರುವಾಗಿದೆ.