ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ. ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಚ್‌ಡಿಕೆ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರ ಲೇವಡಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಕಣ್ಣೀರು ಹಾಕಿರುವುದು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ ಎಂದು ತಿರುಗೇಟು ನೀಡಿದರು.
ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ರಾಜಕಾರಣದಲ್ಲಿ ಕಟುಕರಿದ್ದಾರೆ. ಭಯ ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ. ಕಟುಕರಿಗೆ ಯಾವ ಕಣ್ಣೀರು ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.