Wednesday, April 23, 2025
Google search engine

Homeಅಪರಾಧರಾಮನಗರದಲ್ಲಿ ನೈತಿಕ ಪೊಲೀಸ್‌ಗಿರಿಗೆ ವಿದ್ಯಾರ್ಥಿ ಬಲಿ : ಮೂವರು ಆರೋಪಿಗಳ ಬಂಧನ

ರಾಮನಗರದಲ್ಲಿ ನೈತಿಕ ಪೊಲೀಸ್‌ಗಿರಿಗೆ ವಿದ್ಯಾರ್ಥಿ ಬಲಿ : ಮೂವರು ಆರೋಪಿಗಳ ಬಂಧನ

ರಾಮನಗರ : ಹೋಂ ಸ್ಟೇ ನಲ್ಲಿ ತಂಗಿದ್ದ ಯುವತಿಯರ ಫೋಟೋಗಳನ್ನು ತೆಗೆದಿದ್ದನ್ನು ಪ್ರಶ್ನಿಸಿದಕ್ಕೆ ನೈತಿಕ ಪೊಲೀಸ್ ಗಿರಿ ನಡೆಸಿ ವಿದ್ಯಾರ್ಥಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಹೋಂ ಸ್ಟೇನಲ್ಲಿ ಈ ಒಂದು ಘಟನೆ ನಡೆದಿದೆ.

ಯುವತಿಯರ ಫೋಟೋ ತೆಗೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆ ಚಿಕ್ಕೇನಹಳ್ಳಿ ಹೋಂ ಸ್ಟೇನಲ್ಲಿ ವಿದ್ಯಾರ್ಥಿಯ ಭೀಕರ ಕೊಲೆಯಾಗಿದೆ. ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಫಾರಂ ಹೌಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಮೂಲದ ಪುನೀತ್ (೨೧) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯು ಕಳೆದ ಅಕ್ಟೋಬರ್ ೨೬ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.

ಬಿಕಾಂ ಪದವಿ ಮುಗಿದ ಹಿನ್ನೆಲೆಯಲ್ಲಿ ಯುವತಿಯರು ಹಾಗೂ ಹಲವರು ವಿದ್ಯಾರ್ಥಿಗಳು ಈ ಒಂದು ಹೋಂ ಸ್ಟೇಗೆ ಬೀಳ್ಕೊಡುಗೆ ಸಮಾರಂಭ ಮುಗಿದ ಬಳಿಕ ವಿದ್ಯಾರ್ಥಿಗಳೆಲ್ಲರೂ ಸೇರಿ ಪಾರ್ಟಿ ಮಾಡಲು ಆಗಮಿಸಿದ್ದರು. ಈ ವೇಳೆ ಅಲ್ಲಿದ್ದ ಚಂದು ಮತ್ತು ನಾಗೇಶ್ ಹೋಂ ಸ್ಟೇ ನಲ್ಲಿ ತಂಗಿದ್ದ ಯುವತಿಯರ ಫೋಟೋ ತೆಗೆದಿದ್ದಾರೆ ಇದಕ್ಕೆ ವಿದ್ಯಾರ್ಥಿಯಾದ ಪುನೀತ್ ಯುವತಿಯರೇ ಫೋಟೋ ಯಾಕೆ ತೆಗೆದಿದ್ದೀರಾ ಎಂದು ಪ್ರಶ್ನಿಸಿದ್ದಾನೆ.

ಈ ವೇಳೆ ಚಂದು ಮತ್ತು ನಾಗೇಶ್ ದೊಣ್ಣೆಯನ್ನು ತೆಗೆದುಕೊಂಡು ಬಂದು ವಿದ್ಯಾರ್ಥಿ ಪುನೀತ್ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಪುನೀತ್ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದ ದೃಶ್ಯ ವೈರಲ್ ಆಗಿದೆ. ಹಲ್ಲೆ ಮಾಡಿದ ತಕ್ಷಣ ಪುನೀತ್ ಪೂರ್ತಿ ಕೋಮಾ ಸ್ಥಿತಿಗೆ ತಲುಪಿದ್ದ ಬೆಂಗಳೂರಿನ ಕೆಂಗೇರಿ ಆಸ್ಪತ್ರೆಗೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಪುನೀತ್ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular