ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್‌ನ ಹಿರಿಯ ನಾಯಕ ಮತ್ತು ಶಾಸಕ ಅಬ್ದುಲ್ ರಹೀಂ ರಾಥರ್ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಹಂಗಾಮಿ ಸ್ಪೀಕರ್ ಮುಬಾರಕ್ ಗುಲ್ ಅವರು ಹೊಸ ಅಸೆಂಬ್ಲಿ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರನ್ನು ಅಭಿನಂದಿಸಿದರು.
೮೦ ವರ್ಷದ ಅಬ್ದುಲ್ ರಹೀಮ್ ರಾಥರ್ ಅವರು ಈಗಾಗಲೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ. ೨೦೦೨ರಿಂದ ೨೦೦೮ರವರೆಗೆ ವಿರೋಧ ಪಕ್ಷದ ನಾಯಕರೂ ಆಗಿದ್ದರು. ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಒಮರ್ ಅಬ್ದುಲ್ಲಾ ಅವರ ಕಾಂಗ್ರೆಸ್ ಮೈತ್ರಿ (ಎನ್ ಸಿ) ರಾಜ್ಯದಲ್ಲಿ ಸರ್ಕಾರ ರಚಿಸಿದಾಗ, ಈ ಜವಾಬ್ದಾರಿಯನ್ನು ವಹಿಸಿದ್ದರು.