Saturday, April 19, 2025
Google search engine

Homeರಾಜ್ಯಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್: 23 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್: 23 ಮಂದಿ ಸಾವು, ಹಲವರಿಗೆ ಗಾಯ

ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಬಸ್ವೊಂದು ಆಳವಾದ ಕಂದಕಕ್ಕೆ ಉರುಳಿದ್ದು, ೨೩ ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

೨೦೦ ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ್ದು, ಬಸ್ ನಲ್ಲಿ ೪೦ ಮಂದಿ ಪ್ರಯಾಣಿಕರಿದ್ದರು. ಹಾಗಾಗಿ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ಕುರಿತಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಸಂಭವಿಸಿದ ದುರದೃಷ್ಟಕರ ಬಸ್ ಅಪಘಾತದಲ್ಲಿ ಪ್ರಯಾಣಿಕರ ಸಾವು ನೋವುಗಳ ಅತ್ಯಂತ ದುಃಖದ ಸುದ್ದಿಯನ್ನು ಬೆಳಿಗ್ಗೆ ಸ್ವೀಕರಿಸಿದ್ದೇನೆ. ತ್ವರಿತವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಮತ್ತು ಎಸ್ಡಿಆರ್‌ಎಫ್ ತಂಡಗಳು ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲು ಕ್ಷಿಪ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯಬಿದ್ದರೆ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ವಿಮಾನದಲ್ಲಿ ಸಾಗಿಸಲು ಸೂಚನೆ ನೀಡಲಾಗಿದೆಎಂದೂ ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular