Sunday, April 20, 2025
Google search engine

Homeರಾಜ್ಯನನ್ನ ಜೀವನ ಒಂದು ತೆರೆದಿಟ್ಟ ಪುಸ್ತಕವಿದ್ದಂತೆ,ಬಿಜೆಪಿಯವರು ಮಸಿ ಬಳಿಯಲು ಹೊರಟಿದ್ದಾರೆ, ನೀವು ಅವರ ಮಾತು ನಂಬ್ತೀರಾ.?:...

ನನ್ನ ಜೀವನ ಒಂದು ತೆರೆದಿಟ್ಟ ಪುಸ್ತಕವಿದ್ದಂತೆ,ಬಿಜೆಪಿಯವರು ಮಸಿ ಬಳಿಯಲು ಹೊರಟಿದ್ದಾರೆ, ನೀವು ಅವರ ಮಾತು ನಂಬ್ತೀರಾ.?: ಸಿಎಂ ಸಿದ್ಧರಾಮಯ್ಯ

ಹಾವೇರಿ: ನನ್ನ ಜೀವನ ಒಂದು ತೆರೆದಿಟ್ಟ ಪುಸ್ತಕವಿದ್ದಂತೆ. ಆದರೇ ಬಿಜೆಪಿಯವರು ಮಸಿ ಬಳಿಯಲು ಹೊರಟಿದ್ದಾರೆ. ಅವರ ಮಾತನ್ನು ನೀವು ನಂಬುತ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಶಿಗ್ಗಾವಿಯ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದರು.

ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ದರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ. ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಾಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

RELATED ARTICLES
- Advertisment -
Google search engine

Most Popular